ರಸ್ತೆ ಗುಂಡಿಯಿಂದ ಅಪಘಾತಕ್ಕೀಡಾಗಿ ಕಿರುತೆರೆ ಕಲಾವಿದೆ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ಭಾನುವಾರ ಸಂಭವಿಸಿದೆ. ಕಿರುತೆರೆ ನಟಿ ಸುನೇತ್ರಾ ಪಂಡಿತ್ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಅವೈಜ್ಞಾನಿಕವಾಗಿ ಹಾಕಲಾಗಿದ್ದ ಹಂಪ್ಸ್ ಮತ್ತು ರಸ್ತೆಗುಂಡಿಯಿಂದ ಕೆಳಗೆ ಬಿದ್ದು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುನೇತ್ರಾ ಪಂಡಿತ್ ಶೂಟಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದಾಗ ಎನ್.ಆರ್ ಕಾಲೋನಿಯ 9ನೇ ಅಡ್ಡರಸ್ತೆಯಲ್ಲಿ ರಸ್ತೆ ಗುಂಡಿ ಮತ್ತು ಹಂಪ್ಸ್ ನಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಸುನೇತ್ರಾ