ಚಿಕ್ಕಬಳ್ಳಾಪುರ : ಖಾಸಗಿ ಬಸ್ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ತಂದೆ, ತಾಯಿ ಹಾಗೂ ಮಗ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಗೇಟ್ ಬಳಿ ನಡೆದಿದೆ. ಬೆಂಗಳೂರು ಮೂಲದ ದಂಪತಿ ಗೌಸ್(37), ಅಮ್ಮಾಜಾನ್(33) ಹಾಗೂ ಇವರ ಮಗ ರಿಯಾನ್(13) ಮೃತರು. ಗೌಸ್ ಮೂಲತಃ ಹೊಸಪೇಟೆಯವರು ಹಾಗೂ ಅಮ್ಮಾಜಾನ್ ಆಂಧ್ರಪ್ರದೇಶದ ಕದಿರಿಯದವರು. ಇವರು ಮದುವೆಯಾದ ನಂತರ ಬೆಂಗಳೂರಿಗೆ ಬಂದು ವಾಸ