ಮುಂಬರುವ ಲೋಕಸಭಾ ಚುನಾವಣೆ ಮತ್ತು ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಸೂಚನೆ ಮೇರೆಗೆ ರಾಷ್ಟ್ರೀಯ ಮಹಿಳಾ ಮೋರ್ಚಾವು ‘ಸೆಲ್ಫಿ ವಿದ್ ಬೆನೆಫಿಷಿಯರಿ’ ಎಂಬ ಕಾರ್ಯಕ್ರಮವನ್ನು ರಾಜ್ಯದಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಹಮ್ಮಿಕೊಳ್ಳಲಿದೆ ಎಂದು ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಗೀತಾ ವಿವೇಕಾನಂದ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯಗಳಲ್ಲಿ ಕಾರ್ಯಕ್ರಮ ಪ್ರಾರಂಭವಾಗಿದೆ.