ಸಿಎಂ ಯಡಿಯೂರಪ್ಪ ಪರ ಬ್ಯಾಟ್ ಬೀಸಿದ ಬಿಜೆಪಿ ಹಿರಿಯ ನಾಯಕ

ಬೆಂಗಳೂರು| pavithra| Last Modified ಸೋಮವಾರ, 13 ಜನವರಿ 2020 (06:39 IST)
ಬೆಂಗಳೂರು : ಕೆಲವರು ಹೊಟ್ಟೆಕಿಚ್ಚಿಗೆ  ಯಡಿಯೂrಪ್ಪ ಅವರನ್ನು ದ್ವೇಷಿಸುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಸಿಎಂ ಬಿಎಸ್ ಯಡಿಯೂರಪ್ಪ ಪರವಾಗಿ ಬ್ಯಾಟ್ ಬೀಸಿದ್ದಾರೆ.


ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿರದ ದಿನಗಳಲ್ಲಿ ಯಡಿಯೂರಪ್ಪ ಅವರು ಹಳ್ಳಿಹಳ್ಳಿಗೆ ಸಂಚರಿಸಿ ಪಕ್ಷವನ್ನು ಅಧಕಾರಕ್ಕೆ ತಂದರು. ಆದರೆ ಕೆಲವರು ಹೊಟ್ಟೆಕಿಚ್ಚಿಗೆ  ಯಡಿಯೂrಪ್ಪ ಅವರನ್ನು ದ್ವೇಷಿಸುತ್ತಾರೆ. ಅವರ ಬೆಂಬಲಕ್ಕೆ ನಾನಿದ್ದೇನೆ ಎಂದು ಹೇಳಿದ್ದಾರೆ.

 

ಅಲ್ಲದೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ತೆಳ್ಳನೆಯ ಇಟಲಿಯ ಮಹಿಳೆಗೆ ಹೆದರುತ್ತಿದ್ದರು ಎಂದು ವ್ಯಂಗ್ಯ ಮಾಡಿದ ಅವರು, ಸಿಎಎ ವಿರೋಧಿಸುತ್ತಿರುವ ಕಾಂಗ್ರೆಸ್ ನವರ ವಿರುದ್ಧ ಕಿಡಿಕಾರಿದ್ದಾರೆ.

 
ಇದರಲ್ಲಿ ಇನ್ನಷ್ಟು ಓದಿ :