ಉಡುಪಿ : ಉಡುಪಿ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಕೆ.ಸರಳಾಯ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರಿಗೆ 88 ವರ್ಷ ವಯಸ್ಸಾಗಿದ್ದು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಇವರು ನಿನ್ನೆ ಮಧ್ಯಾಹ್ನತಮ್ಮ ಮನೆಯ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಅಗ್ನಿಶಾಮಕ ದಳದ ಕಾರ್ಯಕರ್ತರು ಶವವನ್ನು ಹೊರಗೆ ತೆಗೆದಿದ್ದಾರೆ, ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಥಬೀದಿಯಲ್ಲಿ ಪಟಾಕಿ ಮಾರಿ ಜೀವನ ನಡೆಸುತ್ತಿದ್ದ ಸರಳಾಯ ಅವರು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.