ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.ಇವರಿಗೆ 88 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಿಗ್ಗೆ 4 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಆರ್.ಪಿಸಿ ಲೇಔಟ್ ನಲ್ಲಿರುವ ಅವರ ಸ್ವಗೃಹದಲ್ಲಿ ಇಂದು ಬೆಳಿಗ್ಗೆ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಾಳೆ ಅವರ ಅಂತ್ಯಕ್ರಿಯೆ ನೇರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.