ಬೆಂಗಳೂರು : ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈ ಹಾಕಿ ತಪ್ಪು ಮಾಡಿದೆವು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ಅವರು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಮಾಜದಲ್ಲಿ ಜಾತಿ ರಹಿತ ವ್ಯವಸ್ಥೆಯನ್ನು ಸ್ಥಾಪಿಸಲು ಮುಂದಾದವರು ಬಸವಣ್ಣ, ಅದರಲ್ಲೂ ಹಿಂದೂ ಧಾರ್ಮಿಕ ಪದ್ಧತಿಗಳ ವಿರುದ್ಧ ಕೆಲ ತತ್ವ ಸಿದ್ಧಾಂತಗಳನ್ನು ಪ್ರಚಾರ ಮಾಡಿದವರು. ಸಿದ್ದರಾಮಯ್ಯ ಒಳ್ಳೆಯದನ್ನು ಮಾಡಿದ್ದಾರೆ