ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಮೂಲಕ ಈ ಭಾಗದ ಪ್ರಗತಿಗೆ ಹೆಚ್ಚಿನ ಒತ್ತು ನೀಡಲಾಗುವುದು ಅಂತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಮಾತನಾಡಿ, ಈ ಭಾಗದ ಜನರ ಭಾವನೆಗೆ ಬೆಲೆಕೊಟ್ಟು ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಇಂದು ಕಲ್ಯಾಣ ಕರ್ನಾಟಕ ಪ್ರದೇಶ ಉದ್ಘೋಷಣೆ ಮಾಡಲು ಸಂತಸದಿಂದ ಬಂದಿದ್ದೇನೆ.ಪ್ರದೇಶ ಮರುನಾಮಕರಣ ಮಾಡಿದ್ದಕ್ಕೆ ಮಾತ್ರ ಅಭಿವೃದ್ಧಿ ಆಗುವುದಿಲ್ಲ.