ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಜೆಡಿಎಸ್ ಕಾರ್ಯಕರ್ತರ ಸರಣಿ ಕಗ್ಗೊಲೆಗಳಿಗೆ ರಾಜಕೀಯ ಕಾರಣ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆರೋಪಿಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟ ಬಳಿ ಪಕ್ಷದ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ ಕಾರ್ಯಕರ್ತರನ್ನು ಕೊಲೆ ಮಾಡಲಾಗಿದೆ. ರಾಜಕೀಯ ಹಿನ್ನೆಲೆಯಿಂದಾಗಿ ಅಪರಾಧಿಗಳನ್ನು ಬಂಧಿಸಿಲ್ಲ ಎನ್ನುವುದು ಚೆನ್ನಾಗಿ ಗೊತ್ತು. ಇದನ್ನು ಸವಾಲಾಗಿಯೇ ಸ್ವೀಕರಿಸುತ್ತೇನೆ ಎಂದು ನೇರವಾಗಿ ಹೇಳಿದರು.