6ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಕೆ.ಆರ್.ನಗರದ ಶಾಲೆಯ ಶಿಕ್ಷಕ ರೋಹಿತ್ ಮೂರು ತಿಂಗಳಿನಿಂದ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ನಿವಾಸಿಯಾದ ರೋಹಿತ್ ಶಾಲಾ ಅವಧಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಬಾಲಕಿಯ ಹಾವಭಾವದಲ್ಲಿ ಬದಲಾವಣೆ ಕಂಡು ಬಂದ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ನಂತರ