ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನಡೆದ ಘಟನೆ ವರದಿಯಾಗಿದೆ. ಅಪ್ರಾಪ್ತ ಬಾಲಕಿಯ ಮೇಲೆ ಸಂಬಂಧಿಕರಿಂದಲೇ ಲೈಂಗಿಕ ಕಿರುಕುಳವಾಗಿದೆ ಎಂದು ಬಾಲಕಿಯ ತಂದೆ ಅನೂಪ್ಕುಮಾರ್ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಲೈಂಗಿಕ ಕಿರುಕುಳಕ್ಕೆ ಒಳಗಾದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಬಾಲಕಿಯ ಹೇಳಿಕೆ ಪಡೆದ ನಂತರ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.