ಬೆಂಗಳೂರು : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಒಂದೇ ವರ್ಷ ಇರೋದು ಅಂತ ಬಿಜೆಪಿಯವರು ಹೇಳ್ತಾರೆ. ಆದರೆ ಈ ಯೋಜನೆ 5 ವರ್ಷ ಪೂರ್ತಿ ಇರುತ್ತೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ‘ಶಕ್ತಿ’ಗೆ ವಿಧಾನಸೌಧದಲ್ಲಿ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತ್ತೆ ಚುನಾವಣೆ ಆಗಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ಆಮೇಲೂ ಉಚಿತ ಕೊಡ್ತೀವಿ. 10 ವರ್ಷವೂ ಉಚಿತ