ರಾಜ್ಯದಲ್ಲಿ ಕೊರೊನಾ ವೈರಸ್ ಗೆ ಕಲಬುರಗಿಯಲ್ಲಿ ಮೊದಲ ಸಾವಿನ ಪ್ರಕರಣ ಕಂಡುಬಂದಿರುವುದರಿಂದಾಗಿ ಇಂದು ನಡೆಯಬೇಕಿದ್ದ ಕಲಬುರಗಿಯ ಪ್ರಖ್ಯಾತ ಶರಣಬಸವೇಶ್ವರ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಕಲಬುರಗಿ ಜಿಲ್ಲೆಯ ಎಲ್ಲಾ ಶಾಲೆ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ಕೋವಿಡ್ 19 ಕ್ಕೆ ದೇಶದಲ್ಲಿ ಮೊದಲ ಸಾವು ಕಲಬುರಗಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಗೆ ಕೊರೊನಾ ಇರುವ ಕುರಿತು ದೃಢಪಟ್ಟಿದೆ. ಮೃತ ವ್ಯಕ್ತಿ ಮಹ್ಮದರ್ ಹುಸೈನ್ ಸಿದ್ಧಿಕಿಯ ಕುಟುಂಬಸ್ಥರು ಹಾಗೂ ಅವರು