ಮಂಗಳೂರು: ಆರ್ ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಸಜೀಪಮುನ್ನೂರು ಗ್ರಾಮದ ಅಬ್ದುಲ್ ಶಾಫಿ (36) ಮತ್ತು ಗಾಳಿಪುರ ಗ್ರಾಮದ ಖಲೀಲ್ ವುಲ್ಲಾ (30) ಬಂಧಿತರು. ಇವರಿಬ್ಬರೂ ಶರತ್ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಐಜಿಪಿ ಹರಿಶೇಖರನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಉಳಿದ ಐವರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಲಾಗಿದೆ. ಅವರ ಬಗ್ಗೆ ಮಹತ್ವದ ಸುಳಿವು ಲಭ್ಯವಾಗಿದ್ದು, ಸದ್ಯದಲ್ಲೇ ಬಲೆಗೆ ಬೀಳಲಿದ್ದಾರೆ ಎಂದು