ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಜೊತೆಗಿನ ಮಾತುಕತೆಗಳ ಸಂದರ್ಭದಲ್ಲಿ ಆರೋಪ ಮುಕ್ತರಾಗುವವರೆಗೂ ಶಶಿಕಲಾ ಜೊಲ್ಲೆ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳುವುದು ನನ್ನ ಸರ್ಕಾರಕ್ಕೆ ಕಪ್ಪು ಚುಕ್ಕೆ ಆಗುತ್ತದೆ. ಬೇಕಾದರೆ ಸ್ಥಾನ ಖಾಲಿ ಇಡೋಣ ಎಂದು ಬೊಮ್ಮಾಯಿ ಹೇಳಿದ್ದರು. ಸಂಪುಟ ರಚನೆಗೆ ದಿಲ್ಲಿಗೆ ಹೋಗುವ ಮೊದಲು ಯಡಿಯೂರಪ್ಪನವರ ಮನೆಗೆ ಹೋಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ವರಿಷ್ಠರಿಗೆ ಏನು ಹೇಳಬೇಕು’ ಎಂದು ಕೇಳಿದಾಗ ‘ಎಲ್ಲಾ ವಲಸಿಗರೂ ಸಚಿವರಾಗಬೇಕು. ಜೊತೆಗೆ ರೇಣುಕಾಚಾರ್ಯ, ರಾಜು ಗೌಡ ಮತ್ತು ಎಸ್.ಆರ್.ವಿಶ್ವನಾಥ