ಬೆಳಗಾವಿ : ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಂದಲೇ ಕಾಂಗ್ರೆಸ್ ಪಕ್ಷ ನಿರ್ನಾಮವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪಿಸಿದರು.ಗೋಕಾಕ್ ನಗರದಲ್ಲಿ ನಡೆದ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಈಗಾಗಲೇ ದೇಶದಲ್ಲಿ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಸಿದ್ದು-ಡಿಕೆಶಿ ಸೇರಿಕೊಂಡು ಪಕ್ಷವನ್ನು ನಿರ್ನಾಮ ಮಾಡ್ತಾರೆ. ಈಗಾಗಲೇ ಪಂಜಾಬ್ನ ಸಿಧು ಜೈಲುಸೇರಿದ್ದಾರೆ.