ಬೆಂಗಳೂರು : ಸಮಾಜದಲ್ಲಿ ಸಮಾನತೆ ಕೊಡುವುದು ಕಾಂಗ್ರೆಸ್ ಪಕ್ಷದ ನಿಲುವು. ನಮ್ಮ ಪಕ್ಷಕ್ಕೆ ಸೇರಿದವರು ನಮ್ಮ ಧ್ಯೇಯೋದ್ದೇಶಗಳನ್ನು ಒಪ್ಪಿಕೊಳ್ಳುತ್ತಾರೆ. ಯಾಕೆಂದರೆ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು ಆ ರೀತಿಯಾಗಿವೆ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್ ಹೇಳಿದರು.ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರನ್ನು ನಾನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸುತ್ತೇನೆ. ಶೆಟ್ಟರ್ ಆಗಮನ ನಮಗೆ ಉತ್ತರ ಕರ್ನಾಟಕ ಭಾಗದಲ್ಲಿ ಸಹಾಯವಾಗುತ್ತದೆ. ಏಕೆಂದರೆ