ಉದ್ಯಮಿಯ ಪುತ್ರನ ಮೇಲೆ ಹಲ್ಲೆ ನಡೆದ ಪ್ರಕರಣ ಆರೋಪಿಯಾಗಿರುವ ಶಾಸಕ ಎನ್.ಎ.ಹ್ಯಾರೀಸ್ ಅವರ ಪುತ್ರನನ್ನು ಹಾಗೂ ಇತರೆ ಆರೋಪಿಗಳನ್ನು ಬಂಧಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನಪ್ರತಿನಿಧಿಗಳ ಮಕ್ಕಳು ಹಲ್ಲೆ ನಡೆಸುವ ವರ್ತನೆ ಬೆಳೆಸಿಕೊಳ್ಳುವುದು ಸರಿಯಲ್ಲ. ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಅವರ ಪುತ್ರನ ವರ್ತನೆ ಖಂಡನೀಯ ಎಂದು ತಿಳಿಸಿದ್ದಾರೆ. ಪೊಲೀಸರು ಯಾವುದೇ ಪ್ರಭಾವಕ್ಕೆ ಒಳಗಾಗದೆ ಆರೋಪಿಗಳನ್ನು ಬಂಧಿಸಿ ಕಾನೂನು