ಬೆಂಗಳೂರು : ವಿಧಾನಸೌಧದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದು ನನಗಂತೂ ತಿಳಿದಿಲ್ಲ ಎಂದು ಕಾಂಗ್ರೆಸ್ ಸಮನ್ವಯ ಸಮಿತಿ ಅದ್ಯಕ್ಷ ಹಾಗು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದಕ್ಕೆ ಇದೀಗ ಗೋಲ್ಡನ್ ಸ್ಟಾರ್ ಗಣೇಶ್ ಪತ್ನಿ, ಬಿಜೆಪಿ ಮುಖಂಡೆ ಶಿಲ್ಪಾ ಗಣೇಶ್ ಅವರು ಟಾಂಗ್ ನೀಡಿದ್ದಾರೆ. ಇತ್ತೀಚೆಗೆ ಮಾನ್ಯ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿಯೂ ಭ್ರಷ್ಟಾಚಾರ ಇದೆ. ಅದನ್ನು ನೆನೆಸಿಕೊಂಡ್ರೆ ಭಯವಾಗುತ್ತೆ ಎನ್ನುವ ಹೇಳಿಕೆ ನೀಡಿದ್ದರು. ಈ ಬಗ್ಗೆ ಮಾಧ್ಯಮದವರು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದಾಗ