ಬೆಂಗಳೂರು: ಮತ್ತೊಮ್ಮೆ ಶಿರಾಡಿ ಘಾಟಿಯಲ್ಲಿ ಸಾಗುವ ಸಾರ್ವಜನಿಕರ ಸಂಚಾರಕ್ಕೆ ತೊಡಕಾಗಲಿದೆ. ಕಾಂಕ್ರೀಟ್ ಕಾಮಗಾರಿ ನಡೆಸಲು ಡಿಸೆಂಬರ್ ಮೊದಲ ವಾರದಿಂದ ಈ ರಸ್ತೆಯಲ್ಲಿ ಪ್ರವೇಶ ನಿಷೇಧಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.13 ಕಿ.ಮೀ. ನಷ್ಟು ಉದ್ದದ ರಸ್ತೆಗೆ ಕಾಂಕ್ರೀಟ್ ಕಾಮಗಾರಿ ನಡೆಯಲಿದ್ದು, ಇದಕ್ಕೆ ಬೇಕಾದ ತಯಾರಿ ಈಗಾಗಲೇ ಆರಂಭವಾಗಿದೆ. ಅಗತ್ಯ ವಸ್ತುಗಳನ್ನು ಶೇಖರಿಸಿಡಲಾಗಿದೆ. ಅರಣ್ಯ ಸಚಿವ ರಮಾನಾಥ ರೈ ಮತ್ತು ಮಹದೇವಪ್ಪ ಅವರೊಂದಿಗೆ ಸಮಾಲೋಚನೆ ನಡೆಸಿದ ನಂತರ ಅಧಿಕೃತವಾಗಿ ರಸ್ತೆ ಪ್ರವೇಶ ನಿರ್ಬಂಧದ