ಬೆಂಗಳೂರು : ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ.