ಶಿವಸೇನೆ ಬ್ಯಾನರ್ ಗೆ ಬೆಂಕಿ ಹಚ್ಚಿ ಕನ್ನಡ ಪರ ಸಂಘಟನೆಗಳ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಸೇನೆ ಉದ್ಧಟತನ ಖಂಡಿಸಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.ಮಹಾರಾಷ್ಟ್ರದ ಕೊಲ್ಹಾಪೂರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಕೃತ್ಯ ಖಂಡಿಸಿ ಹಾಗೂ ಕನ್ನಡ ಚಿತ್ರ ಅವನೇ ಶ್ರೀಮನ್ನಾರಾಯಣ ಪ್ರದರ್ಶನಕ್ಕೆ ಅಡ್ಡಿಪಡಿಸಿ ಕನ್ನಡಿಗರ ಭಾವನೆಗೆ ನೋವುಂಟು ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಯಿತು.ಕರ್ನಾಟಕದಲ್ಲಿ ಶಿವಸೇನೆಗೆ ಬಹಿಷ್ಕಾರ