ಬೆಂಗಳೂರು : ಕರ್ನಾಟಕ ಸಿಎಂ ಫೈಟ್ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಿಎಲ್ಪಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಿದ್ದರಾಮಯ್ಯ ಸಿಎಂ ಎಂದು ಡಿ.ಕೆ.ಶಿವಕುಮಾರ್ ಅವರಿಂದಲೇ ಘೋಷಣೆ ಮಾಡಿಸಲಾಯಿತು. ಕರ್ನಾಟಕ ಸಿಎಂ ಸಿದ್ದರಾಮಯ್ಯ ಎಂದು ಡಿಕೆಶಿ ಘೋಷಿಸಿ, ನಂತರ ಸಿದ್ದು ಕೈ ಕುಲುಕಿ ವಿಶ್ ಮಾಡಿದರು. ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಘೋಷಿಸಿದರು. ಆ ಮೂಲಕ ಒಗ್ಗಟ್ಟಾಗಿದ್ದೇವೆ