ಬೆಂಗಳೂರು : 3 ದಿನ ಟ್ರಾಫಿಕ್ ಸಮಸ್ಯೆ ಸಹಿಸಿಕೊಂಡರೆ ಮುಂದಿನ 50 ವರ್ಷ ಕುಡಿಯುವ ನೀರಿಗೆ ಸಮಸ್ಯೆ ಆಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬೆಂಗಳೂರು ನಗರದ ಜನತೆಯ ಕ್ಷಮಾಪಣೆ ಕೇಳುತ್ತೇನೆ. 3ದಿನ ಬೆಂಗಳೂರಿನಲ್ಲಿ ಸ್ವಲ್ಪ ಟ್ರಾಫಿಕ್ ಸಮಸ್ಯೆ ಆಗುತ್ತದೆ. ಆದರೆ ಮುಂದಿನ 50ವರ್ಷಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆ ಆಗಲ್ಲ. ಬನ್ನಿ ಎಲ್ಲರೂ ಪಾದಯಾತ್ರೆಯಲ್ಲಿ ಭಾಗವಹಿಸಿ ಹೆಜ್ಜೆ ಹಾಕಿ