ಹೆಚ್.ಡಿಕೆ.ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು

ಬೆಂಗಳೂರು| pavithra| Last Modified ಬುಧವಾರ, 9 ಡಿಸೆಂಬರ್ 2020 (13:53 IST)
ಬೆಂಗಳೂರು : ಕಾಂಗ್ರೆಸ್ ಪಕ್ಷದ ಶಾಲು ವ್ಯಾಲ್ಯೂ ಕಳೆದುಕೊಂಡಿದೆ. ಹೀಗಾಗಿ ಹಸಿರು ಶಾಲು ಹಾಕಿಕೊಂಡಿದ್ದಾರೆಂದಿದ್ದ ಹೆಚ್.ಡಿಕೆ.ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರನ್ನು ಪ್ರಧಾನಮಂತ್ರಿ ಮಾಡಿದ್ದು ಆ ಶಾಲು. ಕುಮಾರಸ್ವಾಮಿಯನ್ನ ಸಿಎಂ ಮಾಡಿದ್ದೂ ಅದೇ ಶಾಲು. ಈಗ  ಅವರು ಆ ಶಾಲಿನ ವಿರುದ್ಧವಾಗಿ ಮಾತಾಡುತ್ತಿದ್ದಾರೆ. ಜನರೇ ಇದರ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ಹೆಚ್.ಡಿಕೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :