ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಹೊತ್ತಿನಲ್ಲೇ ಡಿಕೆಶಿಗೆ ಹೈಕೋರ್ಟ್ ಶಾಕ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿದ್ದ ಡಿಕೆಶಿ, ಸಿಬಿಐ ತನಿಖೆಗೆ ವಹಿಸಿರುವ ಸರ್ಕಾರದ ಆದೇಶ ಸರಿಯಲ್ಲ ಎಂದು ಅರ್ಜಿ