ಚಿಕ್ಕಬಳ್ಳಾಪುರ : ಸಾವಿರ ವರ್ಷಗಳ ಇತಿಹಾಸ ಹೊಂದಿರುವ ನಂದಿ ಗಿರಿಧಾಮದ ಭೋಗನಂದೀಶ್ವರ ದೇವಾಲಯದಲ್ಲಿ ಈ ವರ್ಷದಿಂದ ಮೈಸೂರು ದಸರಾ ರೀತಿಯಲ್ಲೇ ಶಿವೋತ್ಸವ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಒಂದು ರಾಜ್ಯ ಹಲವು ಜಗತ್ತು ಎಂದು ಬಣ್ಣಿಸಲಾಗುತ್ತಿದೆ. ಅದೇ ರೀತಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯೂ ಒಂದು ಜಿಲ್ಲೆ, ಹಲವು ಜಗತ್ತು.ಪ್ರವಾಸಿ ತಾಣ, ದೇವಾಲಯ, ನದಿ, ಸರೋವರಗಳ ಜೊತೆ