ದೇಶದಲ್ಲಿ ಉಗ್ರರನ್ನು ಬೆಳೆಸಿರುವ ರಾಷ್ಟ್ರೀಯ ಕಾಂಗ್ರೆಸ್, ಈಗ ಕರ್ನಾಟಕದಲ್ಲಿಯೂ ಅಶಾಂತಿ ವಾತಾವರಣವನ್ನು ಸೃಷ್ಟಿಸಲು ದೇಶದ್ರೋಹಿ ಸಂಘಟನೆಗಳ ಜೊತೆಗೆ ಕೂಡಿಕೊಂಡು ಉಗ್ರವಾದ ಬೆಳೆಸುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್ಎಸ್ಎಸ್ ಮತ್ತು ಬಿಜೆಪಿಯನ್ನು ಉಗ್ರಾಮಿಗಳು ಎಂದು ಕರೆದ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಅರ್ ಎಸ್ ಎಸ್ ಕಳೆದ ಎಂಭತ್ತು ವರ್ಷಗಳಿಂದ