ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕರ್ತವ್ಯ ಮೆರೆದಿದ್ದಾರೆ. ವಿಜಯನಗರದ ಹೊಸಪೇಟೆಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯ ಕಾರಿಣಿಯಲ್ಲಿ ಭಾಗವಹಿಸಲು ಶೋಭ ಕರಂದ್ಲಾಜೆ ಅವರು ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಅಪಘಾತವಾಗಿರುವುದನ್ನು ಕಂಡ ಶೋಭಾ ಅವರು, ಕೂಡಲೇ ಕಾರು ನಿಲ್ಲಿಸಿ ತಮ್ಮ ಕಾರನ್ನು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಬಿಟ್ಟು ಕೊಟ್ಟಿದ್ದಾರೆ. ಈ ವೇಳೆ ಗಾಯಗೊಂಡಿದ್ದ ಸವಾರರ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವೆ, ತಮ್ಮ ವಾಹನದ ಮೂಲಕ ಅವರನ್ನು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆಯನ್ನು ಮಾಡಿದರು. ಅಲ್ಲದೆ ಕಾರ್ಯಕಾರಿಣಿ ನಡೆಯುವ ಸ್ಥಳಕ್ಕೆ, ಸುಮಾರು 5 ಕಿ.ಮೀ ನಷ್ಟು ದೂರ ಬೈಕಿನ ಮೂಲಕ ತೆರಳಿ ಮಾನವೀಯತೆ ಮೆರೆದಿದ್ದಾರೆ. ಸದ್ಯ ಈ ಘಟನೆ ವ್ಯಾಪಕ ಮೆಚ್ಚುಗೆಗೆ ಕಾರಣವಾಗಿದೆ.