ಮೈಸೂರು: ಅತ್ತ ಶಾಸಕರ ರಾಜೀನಾಮೆ ಅಂಗೀಕರಿಸದೇ ಇತ್ತ ಸದನದಲ್ಲಿ ಕಾಂಗ್ರೆಸ್ ಪರವಾಗಿ ಸದನ ನಡೆಸುತ್ತಿರುವ ಸ್ಪೀಕರ್ ರಮೇಶ್ ಕುಮಾರ್ ಕಾಂಗ್ರೆಸ್ ಏಜೆಂಟ್ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ನಡೆಸಿ, ಸರ್ಕಾರ ಬಹುಮತವಿದೆಯೋ ಇಲ್ಲವೋ ಎಂದು ಸಾಬೀತು ಪಡಿಸಲು ಸ್ಪೀಕರ್ ಅವಕಾಶ ಮಾಡಿಕೊಡಬೇಕು. ಅದರ ಬದಲು ಕಾಂಗ್ರೆಸ್ ಪಕ್ಷದ ಏಜೆಂಟ್ ನಂತೆ ನಡೆದುಕೊಳ್ಳುತ್ತಿದ್ದಾರೆ.ಶಾಸಕರು ಸ್ವ ಇಚ್ಛೆಯಿಂದ ರಾಜೀನಾಮೆ