ಡಿಆರ್ಡಿಒ ಸಂಸ್ಥೆ ಲಡಾಖಿನಲ್ಲಿ ಹಮ್ಮಿಕೊಂಡಿದ್ದ ಕಿಸಾನ್ ಮೇಳದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪಾಲ್ಗೊಂಡಿದ್ದರು. ಈ ವೇಳೆ ಲಡಾಕ್ನ ನಿಮ್ಮು ಪ್ರದೇಶಕ್ಕೆ ಭೇಟಿಕೊಟ್ಟಿದ್ದಾರೆ. ಉಡುಪಿ ಚಿಕ್ಕಮಗಳೂರು ಸಂಸದೆ ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಡಿಆರ್ಡಿಒ ನಡೆಸಿರುವ ರಾಷ್ಟ್ರ ಮಟ್ಟದ ಕೃಷಿ ಮೇಳ ಮತ್ತು ಕೃಷಿ ಉಪಕರಣಗಳ ಮಾಹಿತಿ ಕಾರ್ಯಾಗಾರದಲ್ಲಿ ಭಾಗಿಯಾಗಿದ್ದಾರೆ. ಆಧುನಿಕ ಮತ್ತು ಪಾರಂಪರಿಕ ಕೃಷಿ ಪದ್ಧತಿಗಳ ಬಗ್ಗೆ ರೈತರಿಗೆ ಅಧಿಕಾರಿಗಳು ಜನಪ್ರತಿನಿಧಿಗಳು ಚರ್ಚೆ ಮಾಡಿದ್ದಾರೆ.