ಮಂಗಳೂರಿನ ಗಲಭೆ ನಿಯಂತ್ರಣಕ್ಕೆ ಉಸ್ತುವಾರಿಯಾಗಿ ಕೆಂಪಯ್ಯನವರನ್ನು ವಹಿಸಲಾಗುವುದು ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಂಸದೆ ಶೋಭಾ ಕರಂದ್ಲಾಜೆ, ಕೆಂಪಯ್ಯನವರ ಮೂಲಕವೇ ಎಲ್ಲಾ ಮಾಡಿಸಿ ಎಂದು ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವರ ಸಲಹೆಗಾರರಾಗಿರುವ ಕೆಂಪಯ್ಯ ನನಗೆ ಹುದ್ದೆಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಹೇಳಿ ಉದ್ಯೋಗದಿಂದ ನಿರ್ಗಮಿಸಿದ್ದಾರೆ. ಅಂತಹ ವ್ಯಕ್ತಿಗೆ ಮಂಗಳೂರಿನ ಉಸ್ತುವಾರಿಯಾಗಿ ನೇಮಿಸಲಾಗಿದೆ ಎಂದು ಲೇವಡಿ ಮಾಡಿದ್ದಾರೆ. ಮಂಗಳೂರು ಹಿಂಸಾಚಾರಕ್ಕೆ ಪ್ರಚೋದಿಸಿದ ಆರೋಪ ಎದುರಿಸುತ್ತಿರುವ ಸಚಿವರಾದ