ತಿವಾರಿ ಸಾವು: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಶೋಭಾ ಪತ್ರ

ಬೆಂಗಳೂರು| Rajesh patil| Last Modified ಬುಧವಾರ, 17 ಮೇ 2017 (15:53 IST)
ಆಹಾರ ಇಲಾಖೆಯ ಆಯುಕ್ತರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವಿನ ಬಗ್ಗೆ ತನಿಖೆ ನಡೆಸಿ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸಿಎಂ ಯೋಗಿ ಆದಿತ್ಯನಾಥ್‌ಗೆ ಪತ್ರ ಬರೆದಿದ್ದಾರೆ.


ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅನುರಾಗ್ ತಿವಾರಿ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ ಹಿಂದಿನ ಷಡ್ಯಂತ್ರ ರಾಜ್ಯದ ಜನತೆಗೆ ಗೊತ್ತಾಗಬೇಕಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.


ಕರ್ನಾಟಕ ಕೇಡರ್‌ನ ಎಐಎಸ್ ಅಧಿಕಾರಿಯಾಗಿದ್ದ ಅನುರಾಗ್ ತಿವಾರಿಯವರ ಮೃತದೇಹ ಲಕ್ನೋದ ಹಜರತ್‌ಗಂಜ್‌ನಲ್ಲಿರುವ ಗೆಸ್ಟ್‌ಹೌಸ್ ಬಳಿ ಪತ್ತೆಯಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
ಇದರಲ್ಲಿ ಇನ್ನಷ್ಟು ಓದಿ :