ರೈತರಿಗೆ, ಬೆಳೆಗಾರರಿಗೆ ಕಹಿ ಸುದ್ದಿಯೊಂದು ಬಂದಿದೆ. 2019-20ನೇ ಸಾಲಿಗೆ ಭಾರತೀಯ ಹತ್ತಿ ನಿಗಮದ ವತಿಯಿಂದ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಧಾರವಾಡದ ಬೇಲೂರಿನ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿಸಲಾಗಿರುವ ಹತ್ತಿ ಖರೀದಿ ಕೇಂದ್ರದಲ್ಲಿ ಖರೀದಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. ಜ. 09 ರಿಂದ ಜ. 10 ರವರೆಗೆ ಹತ್ತಿ ಖರೀದಿಯನ್ನು ಸ್ಥಗಿತಗೊಳಿಸಲಾಗಿದೆ. ಜ.11 ರಿಂದ ಖರೀದಿ ಪ್ರಕ್ರಿಯೆ ಪುನಃ ಆರಂಭಿಸಲಾಗುತ್ತದೆ.ಕೈಗಾರಿಕಾ ಪ್ರದೇಶದಲ್ಲಿನ ಜಿನ್ನಿಂಗ್ ಪ್ಯಾಕ್ಟರಿಗಳ ಯಂತ್ರಗಳು ದುರಸ್ತಿಯಲ್ಲಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.