ಕೊರೊನ ಕಾರಣದಿಂದ ಈಗಾಗಲೇ ಶಿಕ್ಷಣ ಇಲಾಖೆ ಸೈಕಲ್ ಭಾಗ್ಯಕ್ಕೆ ಬಾಯ್ ಬಾಯ್ ಅಂದಿತ್ತು .. ಈಗ ಶೂ ಹಾಗೂ ಸಾಕ್ಸ್ ಯೋಜನೆಗೂ ಕೂಡ ನಾಮ ಹಾಕೋದಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ .ಶಿಕ್ಷಣ ಇಲಾಖೆ ಕರೋನ ಹೆಸರಲ್ಲಿ ಒಂದೊಂದೇ ಮಹತ್ವಕಾಂಕ್ಷೆ ಯೋಜನೆಗೆ ಪಂಗನಾಮ ಹಾಕೋದಕ್ಕೆ ಮುಂದಾಗ್ತಾ ಇದೆ. ಈಗಾಗಲೇ ಸರ್ಕಾರಿ ಶಾಲಾ ಮಕ್ಕಳಿಗೆ ಸೈಕಲ್ ಶಾಕ್ ಕೊಟ್ಟಿದ್ದ ರಾಜ್ಯ ಸರ್ಕಾರ ಈಗ ಮತ್ತೊಂದು ಶಾಕ್ ಕೊಟ್ಟಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ನೀಡುತ್ತಿದ್ದ ಶೂ ಮತ್ತು ಸಾಕ್ಸ್ ಈ ವರ್ಷ ಕೊಡಲ್ಲ ಎಂದಿದ್ದಾರೆ .