ಮಣಿಪುರದಲ್ಲಿ ಯುವತಿಯರನ್ನ ಬೆತ್ತಲೆ ಮಾಡಿದ್ದಾರೆ. ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗ್ತಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಣಿಪುರ ಹಿಂಸಾಚಾರಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ. ಸರ್ವೋಚ್ಚ ನ್ಯಾಯಾಲಯ ಕೇಂದ್ರ ಹಾಗೂ ಮಣಿಪುರ ಸರ್ಕಾರಕ್ಕೆ ಚಾಟಿ ಬೀಸಿದೆ. ಬೆತ್ತಲೆ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವಾಗಿ 14 ದಿನಗಳಾದರೂ ಈ ಬಗ್ಗೆ ಪ್ರಕರಣ ದಾಖಲಿಸಿಲ್ಲ. IPC ಸೆಕ್ಷನ್ 356ರ ಪ್ರಕಾರ ಮಣಿಪುರದಲ್ಲಿ ನಿಯಮ ಉಲ್ಲಂಘನೆಯಾಗಿದೆ. ಹಾಗಾಗಿ ಮಣಿಪುರವನ್ನ ರಾಷ್ಟ್ರಪತಿ ಆಡಳಿತಕ್ಕೆ ನೀಡಬೇಕು.