ಅಮೆರಿಕದ ಫ್ಲೋರಿಡಾದಲ್ಲಿ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಾರಿನಲ್ಲಿ ಬಂದ ನಾಲ್ವರು ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಅಮೆರಿಕದಲ್ಲಿ ದಿನಕಳೆದಂತೆ ಶೂಟೌಟ್ ಪ್ರಕರಣಗಳು ಹೆಚ್ಚುತ್ತಿವೆ. ದುಷ್ಕರ್ಮಿಗಳು ಚಲಿಸುತ್ತಿರುವ ವಾಹನದಿಂದ ಮನಬಂದಂತೆ ಗುಂಡು ಹಾರಿಸಿದ್ದಾರೆ. ಸ್ವಲ್ಪ ಸಮಯದ ನಂತರ ಅಲ್ಲಿಂದ ದುಷ್ಕರ್ಮಿಗಳು ತೆರಳಿದ್ದಾರೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಗಾಯಗೊಂಡವರೆಲ್ಲರೂ 20 ರಿಂದ 35