ಶಾರ್ಟ್ ಸರ್ಕ್ಯೂಟ್ನಿಂದಾಗಿ 24 ತರಕಾರಿ ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ದಾವಣಗೆರೆಯ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಭಾನುವಾರ-ಸೋಮವಾರದ ನಡುವಿನ ರಾತ್ರಿ ನಡೆದಿದೆ. ನಗರದ ಹೊಸ ಬಸ್ ನಿಲ್ದಾಣದ ಎದುರಿಗೆ ಇರುವ ಎಪಿಎಂಸಿ ಮಳಿಗೆಯಲ್ಲಿ ಈ ದುರಂತ ಸಂಭವಿಸಿದ್ದು, ಸುಮಾರು ಮೂರು ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ರಾತ್ರಿ ವ್ಯಾಪಾರಿಗಳು ತಮ್ಮ ತಮ್ಮ ಅಂಗಡಿಗಳಲ್ಲಿ ಲಕ್ಷ್ಮಿ ಪೂಜೆ ಮಾಡಿ ಬಾಗಿಲು ಹಾಕಿ ಮನೆಗೆ ಹೋದ ಸಂದರ್ಭದಲ್ಲಿ ಈ ಅವಘಡ