ಕಾಂಗ್ರೆಸ್ ಮುಖಂಡ ಗಿರೀಶ ಕಂಬಾನೂರ ಕೊಲೆಯ ಪ್ರಮುಖ ಆರೋಪಿ ವಿಜಯ ಹಳ್ಳಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಲಬುರಗಿಯ ಶಹಬಾದ್ ಪಟ್ಟಣದ ಹೊರವಲಯದಲ್ಲಿ ಗುಂಡಿನ ದಾಳಿ ನಡೆಸಲಾಗಿದ್ದು, ಆರೋಪಿಯ ಬಲಗಾಲಿಗೆ ಗುಂಡೇಟು ತಗುಲಿದೆ.ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಪಿಎಸ್ಐ ಸುವರ್ಣಾ ಅವರಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜುಲೈ 11ರಂದು ಶಹಬಾದ್ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ ಗಿರೀಶ ಕಂಬಾನೂರ ಕೊಲೆ ನಡೆದಿತ್ತು.ಪ್ರಕರಣದ ಆರೋಪಿ ವಿಜಯನನ್ನು