ಸಾವಿನ ಸಂದರ್ಭದಲ್ಲಿ ಶವದ ಮೇಲೆ ರಾಜಕಾರಣ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರಾದರೂ ಸಾವನ್ನಪ್ಪಿದಾಗ ಸಾಂತ್ವಾನ ಹೇಳಬೇಕು. ಆದರೆ, ರಾಜಕಾರಣ ಮಾಡಬಾರದು ಎಂದಿದ್ದಾರೆ. ದ್ವೇಷದ ರಾಜಕಾರಣ ಮಾಡುವುದಕ್ಕೆ ಕೊನೆ ಎಂಬುದು ಇಲ್ಲ. ಆದರೆ, ಧಾರ್ಮಿಕ ಭಾವನೆಗಳನ್ನು ಕೆರಳಿಸುವುದರಿಂದ ಸಮಾಜಕ್ಕೆ ಹಾನಿಯಾಗಲಿದೆ ಎಂದು ತಿಳಿಸಿದ್ದಾರೆ. ಯಾವುದೇ ರಾಜಕೀಯ ಪಕ್ಷಗಳಾಗಲಿ, ಸಂಘಟನೆಗಳಾಗಲಿ ಘರ್ಷಣೆಗೆ ಪ್ರಚೋದಿಸಬಾರದು. ಸಮಾಜದಲ್ಲಿ ಶಾಂತಿ-ಸಾಮರಸ್ಯ ಕಾಪಾಡಲು ಪ್ರಯತ್ನಿಸಬೇಕು. ಬಶೀರ್ ಮೇಲಿನ