ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಅವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಮಾಜಿ ಸಿಎಂ ಧರ್ಮಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ವಿಜಯಪುರದ ಮುದ್ದೇಬಿಹಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮಹಾ ಸಮುದ್ರ ಇದ್ದಂತೆ. ಏನಾದರೂ ಹೆಚ್ಚು ಕಡಿಮೆ ಎನ್ನಿಸಿದೂ ಹೊಂದಿಕೊಂಡು ಹೋಗಬೇಕು ಎಂದರು. ಕೃಷ್ಣ ಅವರ ಮುಂದಿನ ನಡೆ ಇನ್ನೂ ಖಚಿತವಾಗಿಲ್ಲ. ಅವರು ಬಿಜೆಪಿ ಪಕ್ಷ ಸೇರುತ್ತಾರೆ ಎನ್ನುವುದು ಮಾಧ್ಯಮದ ಸೃಷ್ಟಿ. ಅವರನ್ನು