ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು| Krishnaveni K| Last Modified ಸೋಮವಾರ, 7 ಜೂನ್ 2021 (09:56 IST)
ಬೆಂಗಳೂರು: ಜ್ವರದಿಂದ ಬಳಲುತ್ತಿದ್ದ ಕಾರಣ, ಮಾಜಿ ಸಿಎಂ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

 
ಜ್ವರದಿಂದ ಬಳಲುತ್ತಿದ್ದ ಸಿದ್ದರಾಮಯ್ಯ ಕಳೆದ ವಾರ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಎರಡು ದಿನಗಳಿಂದ ಹೆಚ್ಚುವರಿಯಾಗಿ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆದ ಸಿದ್ದರಾಮಯ್ಯ, ಈಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ಬಿಡುಗಡೆಯಾಗಲಿದ್ದಾರೆ.
 
ಸಿದ್ದರಾಮಯ್ಯಗೆ ಕೊರೋನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿತ್ತು. ಡಿಸ್ಚಾರ್ಜ್ ಆದ ಬಳಿಕ ತಮ್ಮ ನಿವಾಸಕ್ಕೆ ತೆರಳಿ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ.
ಇದರಲ್ಲಿ ಇನ್ನಷ್ಟು ಓದಿ :