ಅಗಲಿದ ಹಿರಿಯ ಚೇತನ, ನಡೆದಾಡುವ ದೇವರು ಡಾ. ಶಿವಕುಮಾರ ಸ್ವಾಮೀಜಿ ಅವರ ನೆನಪು ಜನಮಾನಸದಲ್ಲಿ ಉಳಿಯುವ ಯೋಜನೆಯೊಂದನ್ನು ಮುಂದಿನ ಬಜೆಟ್ನಲ್ಲಿ ಘೋಷಿಸಲು ಮುಖ್ಯಮಂತ್ರಿ ಸಮ್ಮತಿ ನೀಡಿದ್ದಾರೆ. ಸಿದ್ದಗಂಗಾ ಶ್ರೀಗಳ ಹೆಸರಿನಲ್ಲಿ ಯೋಜನೆ ಶೀಘ್ರ ಜಾರಿಗೊಳಿಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರು ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಹಿರಿಯ ಶ್ರೀಗಳಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ