ಸಿದ್ಧಗಂಗಾ ಮಠದ ಸ್ವಾಮೀಜಿಗಳು ಅನಾರೋಗ್ಯಕ್ಕೆ ಒಳಗಾಗಿರುವುದರಿಂದಾಗಿ ಮಠದ ವಿದ್ಯಾರ್ಥಿಗಳಿಂದ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.ಸಿದ್ಧಗಂಗಾ ಶ್ರೀಗಳು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥನೆಯನ್ನು ಸಾವಿರಾರು ವಿದ್ಯಾರ್ಥಿಗಳು ಸಲ್ಲಿಸಿದರು. ಹತ್ತು ನಿಮಿಷ ಕೈಮುಗಿದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ ವಿದ್ಯಾರ್ಥಿಗಳ ಜತೆಗೆ ಮಠದ ಭಕ್ತರಿಂದಲೂ ಪ್ರಾರ್ಥನೆ ಸಲ್ಲಿಸಲಾಯಿತು.ಶ್ರೀಗಳ ಗದ್ದುಗೆಗೆ ನಮಸ್ಕರಿಸಿ ಪ್ರಾರ್ಥಿಸುತ್ತಿರುವ ಭಕ್ತರು, ಶ್ರೀಗಳು ಶೀಘ್ರ ಗುಣವಾಗಲೆಂದು ಬೇಡಿಕೊಳ್ಳುತ್ತಿದ್ದಾರೆ.