ತುಮಕೂರು : ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದುಬಂದಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಗಳಿಗೆ ಹಳೆ ಮಠದಲ್ಲೇ ಡಾ.ಪರಮೇಶ್ ನೇತೃತ್ವದ ತಂಡ ಚಿಕಿತ್ಸೆ ನೀಡುತ್ತಿದ್ದಾರೆ. ಶ್ರೀಗಳ ಆರೋಗ್ಯದಲ್ಲಿ ಭಾನುವಾರ ರಾತ್ರಿ ಅಲ್ಪ ಏರುಪೇರಾದ ಹಿನ್ನಲೆಯಲ್ಲಿ ಮಠಕ್ಕೆ ದೊಡ್ಡ ಪ್ರಮಾಣದ ಭಕ್ತರು ಆಗಮಿಸಿ ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದ ಕೋಣೆಯ ಕಿಟಿಕಿಯ ಮೂಲಕ ದರ್ಶನ ಪಡೆದು ಹೋಗುತ್ತಿದ್ದರು. ಹಾಗೇ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ