ಮೈಸೂರು: ಬಿಜೆಪಿ ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಸೋಲು ಮತ್ತು ಹತಾಶೆಯ ಸಂಕೇತವಾಗಿದೆ. ತಾವು ಪ್ರಬಲ ನಾಯಕರಾಗಿ ಹೊರಹೊಮ್ಮಿದ್ದರಿಂದ ತಮ್ಮನ್ನು ಗುರಿಯಾಗಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.