ಬೆಂಗಳೂರು : ಕರ್ನಾಟಕದಲ್ಲಿ ನೆರೆ ಅಥವಾ ಬರ ಪರಿಸ್ಥಿತಿ ಎದುರಾದ ಸಂದರ್ಭಗಳಲ್ಲಿ ಹಿಂದಿನ ಯಾವ ಕೇಂದ್ರ ಸರ್ಕಾರವೂ, ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿರಲಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಭೀಕರ ಪ್ರವಾಹ ಉಂಟಾಗಿ 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಪ್ರವಾಹದಿಂದಾಗಿ ರಾಜ್ಯಕ್ಕೆ 40 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಸಿಎಂ