ಬೆಂಗಳೂರು : ವಿಧಾನಸಭೆಯಲ್ಲಿ ಮಾಧ್ಯಮಗಳಿಗೆ ಸ್ಪೀಕರ್ ನಿರ್ಬಂಧ ಹೇರಿರುವ ಹಿನ್ನೆಲೆ, ವಿರೋಧ ಪಕ್ಷದವರ ಧ್ವನಿ ತಗ್ಗಿಸುವ ಕೆಲಸ ನಡೀತಾ ಇದೆ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ವಿಧಾನಸಭೆ ಕಲಾಪದಲ್ಲಿ ಆಡಳಿತ ಪಕ್ಷದ ಮಾತುಗಳನ್ನು ಡಿಡಿ ಚಂದನ ಸೆನ್ಸಾರ್ ಮಾಡಿ ಬಿತ್ತರಿಸುತ್ತಿದೆ. ಅಲ್ಲದೇ ಡಿಡಿ ಚಾನೆಲ್ ನಲ್ಲಿ ಆಡಳಿತ ಪಕ್ಷದವರ ಧ್ವನಿ ಮಾತ್ರ ಕೊಡುತ್ತಿದ್ದಾರೆ. ವಿರೋಧ ಪಕ್ಷದ ಸದಸ್ಯರು ಮಾತನಾಡುವಾಗ ಧ್ವನಿ ತಗ್ಗಿಸುತ್ತಿದ್ದಾರೆ