ಸಿಎಂ ಬಿಎಸ್ ಯಡಿಯೂರಪ್ಪಗೆ ಸವಾಲು ಹಾಕಿದ ಸಿದ್ದರಾಮಯ್ಯ

ಬೀದರ್| pavithra| Last Modified ಗುರುವಾರ, 8 ಏಪ್ರಿಲ್ 2021 (13:24 IST)
ಬೀದರ್ : ಬೆಲೆ ನಿಯಂತ್ರಿಸುವಲ್ಲಿ ಪ್ರಧಾನಿ ಮೋದಿ ಸರ್ಕಾರ ಸೋತಿದೆ. 7 ವರ್ಷದಿಂದ ಪ್ರಧಾನಿ ಮೋದಿ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರೋಪಿಸಿದ್ದಾರೆ.

ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ,  ಸಾಲ ತಂದು ಸಂಬಳ ಕೊಟ್ರೆ ರಾಜ್ಯದ ಅಭಿವೃದ್ಧಿ ಹೇಗೆ? ಕರ್ನಾಟಕ ರಾಜ್ಯ ಸಾಲದ ಸುಳಿಯಲ್ಲಿ ಸಿಲುಕಿ ನರಳುತ್ತಿದೆ ಎಂದು ಹೇಳಿದ್ದಾರೆ.

ಇಂದಿರಾ ಕ್ಯಾಂಟೀನ್, ಕೃಷಿ ಭಾಗ್ಯ ಯೋಜನೆ ನಿಲ್ಲಿಸಿದ್ದಾರೆ. ಅನ್ನ ಭಾಗ್ಯ ಯೋಜನೆಯ ಅಕ್ಕಿ ಕೂಡ ಕಡಿತ ಮಾಡಿದ್ದಾರೆ.  ಕಲ್ಯಾಣ ಕರ್ನಾಟಕ ಭಾಗಕ್ಕೆ ಹಣ ಬಿಡುಗಡೆ ಮಾಡುತ್ತಿಲ್ಲ. ಹೆಸರಿಗೆ ಮಾತ್ರ ಕಲ್ಯಾಣ ಕರ್ನಾಟಕ ಎಂದು ನಾಮಕರಣ. ಬೇಕಾದರೆ ಚರ್ಚೆಗೆ ಬನ್ನಿ ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಸವಾಲು ಹಾಕಿದ್ದಾರೆ. ಇದರಲ್ಲಿ ಇನ್ನಷ್ಟು ಓದಿ :