ಬೆಂಗಳೂರು : ರಾಜ್ಯ ಸರ್ಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಿದ್ದು, ಇದೀಗ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ನವೆಂಬರ್ 1 ರ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಸಾಹಿತ್ಯ, ಕಲೆ, ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 64 ಸಾಧಕರಿಗೆ 2019ರ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ. ಸೋಮವಾರ ಸಚಿವ ಸಿಟಿ ರವಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.